ಹುಬ್ಬಳ್ಳಿ: ಸ್ಥಳೀಯ ಸಂಸ್ಥೆಗಳಿಂದ ಇಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ೨೦ ಸ್ಥಾನಗಳಲ್ಲಿ ೧೫ ಸ್ಥಾನಗಳನ್ನು ಪಡೆದು ಗೆಲವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಪಾಲಿಕೆಯ ಬೂತ್ ನಲ್ಲಿ ಮತದಾನ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಿಗ್ಗೆ ಮುಖ್ಯಮಂತ್ರಿಯವರ ಜೊತೆಗೆ ಬೆಂಗಳೂರಿನಿಂದ ಪ್ರವಾಸ ಮಾಡಿದ್ದೇವೆ. ಅವರಿಂದ ಅಲ್ಲದೇ ವಿವಿಧ ಜಿಲ್ಲಾ ಜಿಲ್ಲಾಧ್ಯಕ್ಷರುಗಳಿಂದ ಮಾಹಿತಿ ಪಡೆದಿದ್ದೇನೆ. ನಮ್ಮೆಲ್ಲರ ಅಭ್ಯರ್ಥಿಗಳು ವಿಶ್ವಾಸದಲ್ಲಿದ್ದಾರೆ, ದೇಶದಲ್ಲಿ ಬಿಜೆಪಿ ಸರ್ಕಾರಗಳು ಮಾಡಿರುವ ಕೆಲಸ ನಮ್ಮ ಸಂಘಟನಾ ಶಕ್ತಿಯನ್ನು ಉಪಯೋಗಿಸಿಕೊಂಡು ಈ ಹಿಂದೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ.
ಹಾಗಾಗಿ ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಮೊದಲ ಪ್ರಾಶಸ್ತ್ಯದಲ್ಲಿ ದಾಖಲೆಯ ಗೆಲವು ಸಾಧಿಸಲಿದ್ದಾರೆ ಎಂದರು.
Kshetra Samachara
10/12/2021 12:58 pm