ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 13ರಂದು ಭವ್ಯ ಕಾಶಿ ದಿವ್ಯ ಕಾಶಿ ನೇರ ಪ್ರಸಾರ: ಟೆಂಗಿನಕಾಯಿ

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ ಇದೇ 13ರಂದು ನಡೆಯಲಿರುವ ಎಲ್ಲಾ ಜ್ಯೋತಿರ್ಲಿಂಗಗಳ ಕೇಂದ್ರಗಳಲ್ಲಿ ದಿವ್ಯ ಕಾಶಿ ಭವ್ಯ ಕಾಶಿ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ದೇಶಾದ್ಯಂತ 51,000 ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದಲ್ಲಿಂದು ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ನೇತೃತ್ವದಲ್ಲಿ ದಿವ್ಯ ಕಾಶಿ ಭವ್ಯ ಕಾಶಿ ಎಂಬುವಂತ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಎಲ್ಲಾ ಜ್ಯೋತಿರ್ಲಿಂಗ ಕೇಂದ್ರದಲ್ಲಿ ನಡೆಯಲಿರುವ ಸಮಾರಂಭವನ್ನು ನೇರ ಪ್ರಸಾರದ ಮೂಲಕ ಜನರಿಗೆ ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದ್ದು,ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ಮೂರುಸಾವಿರ ಮಠದಲ್ಲಿ ದೊಡ್ಡ ಎಲ್ಇಡಿ ಪರದೆಯ ಮೂಲಕ ವ್ಯವಸ್ಥೆ ಮಾಡಲಾಗಿದೆ ಎಂದರು.

ಬಾಬಾ ವಿಶ್ವನಾಥನ ನಗರವಾದ ಕಾಶಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ ಡಿಸೆಂಬರ್ 05ರಿಂದ ಆರಂಭವಾಗಿದ್ದು, 12ಕ್ಕೆ ಮುಕ್ತಾಯಗೊಳ್ಳಲಿದೆ. ಡಿಸೆಂಬರ್ 13ರಂದು ದಿವ್ಯ ಕಾಶಿ ಭವ್ಯ ಕಾಶಿ ಸಮಾವೇಶ ಮಾಡಲಾಗುತ್ತದೆ ಎಂದು ಅವರು ಹೇಳಿದರು.

Edited By : Manjunath H D
Kshetra Samachara

Kshetra Samachara

11/12/2021 01:35 pm

Cinque Terre

15.09 K

Cinque Terre

0

ಸಂಬಂಧಿತ ಸುದ್ದಿ