ಧಾರವಾಡ: ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಅವರು ನಾಳೆ ಜನತಾದಳ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೋನರಡ್ಡಿ ಅವರು ನಾಳೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿಲ್ಲ. ಅದರ ಬದಲಿಗೆ ಡಿ.14 ರಂದು ಬೆಳಗಾವಿಯಲ್ಲಿ ತೆನೆ ಭಾರ ಇಳಿಸಿ ಕೈ ಹಿಡಿಯಲಿದ್ದಾರೆ.
ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೋನರಡ್ಡಿ ನಾಡಿದ್ದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
ಜನತಾದಳ ತೊರೆದು ಕಾಂಗ್ರೆಸ್ ಪಕ್ಷ ಸೇರಲು ಕಾರಣ ಏನು? ನಿಮ್ಮ ರಾಜಕೀಯ ಗುರುಗಳಾದ ಬಸವರಾಜ ಹೊರಟ್ಟಿ ಅವರನ್ನು ಬಿಟ್ಟು ಕಾಂಗ್ರೆಸ್ ಸೇರಲು ಕಾರಣ ಏನು? ಎಂಬ ಪ್ರಶ್ನೆಗೆ ಕೋನರಡ್ಡಿ ಉತ್ತರಿಸಲಿಲ್ಲ. ಅದೆಲ್ಲ ಈಗ ಫೋನಿನಲ್ಲಿ ಬೇಡ. ಬೇರೆ ಸಂದರ್ಭದಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದಿರುವ ಕೋನರಡ್ಡಿ, ನಾಡಿದ್ದು ಅಧಿಕೃತವಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
Kshetra Samachara
12/12/2021 10:29 pm