ಧಾರವಾಡ: ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯ ಮತ ಎಣಿಕೆ ನಾಳೆ ಧಾರವಾಡದ ಕೃಷಿ ವಿಶ್ವವಿದ್ಯಾಲಯಲ್ಲಿ ನಡೆಯಲಿದೆ.
ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳನ್ನೊಳಗೊಂಡು ಚುನಾವಣೆ ನಡೆದಿತ್ತು. ಮೂರು ಜಿಲ್ಲೆಗಳಿಂದ ಬಂದ ಮತಪತ್ರಗಳನ್ನು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ತೆರೆಯಲಾದ ಸ್ಟ್ರಾಂಗ್ ರೂಮ್‌ನಲ್ಲಿ ಭದ್ರವಾಗಿ ಇಡಲಾಗಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟು ಚುನಾವಣೆ ನಡೆದಿದೆ. ನಾಳೆ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.
ಮತ ಎಣಿಕೆ ಮುನ್ನಾ ದಿನವಾದ ಸೋಮವಾರ ಸ್ಟ್ರಾಂಗ್ ರೂಮ್‌ಗಳಿಗೆ ಭೇಟಿ ಕೊಟ್ಟ ಚುನಾವಣಾಧಿಕಾರಿಗಳೂ ಆದ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮತ ಎಣಿಕೆ ಪೂರ್ವ ಸಿದ್ಧತೆ ವೀಕ್ಷಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ ಎಂದರು.
ನಾಳೆ ಬೆಳಿಗ್ಗೆ 7.30ಕ್ಕೆ ಸ್ಟ್ರಾಂಗ್ ರೂಮ್‌ಗಳನ್ನು ತೆರೆಯಲಾಗುತ್ತದೆ. ಗದಗ ಜಿಲ್ಲೆಯಲ್ಲಿ 1951, ಹಾವೇರಿ ಜಿಲ್ಲೆಯಲ್ಲಿ 3356 ಹಾಗೂ ಧಾರವಾಡ ಜಿಲ್ಲೆಯಲ್ಲಿ 2145 ಮತಗಳು ಸೇರಿ ಒಟ್ಟು 7452 ಮತಗಳು ಚಲಾವಣೆ ಆಗಿವೆ. ಮತ ಎಣಿಕೆಗೆ 14 ಟೇಬಲ್‌ಗಳನ್ನು ತೆರೆಯಲಾಗಿದ್ದು, 77 ಜನ ಮತ ಎಣಿಕಾ ಸಿಬ್ಬಂದಿ, 230 ಜನ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
Kshetra Samachara
13/12/2021 06:50 pm