ಧಾರವಾಡ: ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯ ಮತ ಎಣಿಕಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಮೊದಲ ಪ್ರಾಶ್ಯಸ್ತ್ಯದ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ.
5600 ಮೊದಲ ಪ್ರಾಶ್ಯಸ್ತ್ಯದ ಮತಗಳಲ್ಲಿ ಸಲೀಂ ಅಹ್ಮದ್ ಅವರು 2500 ಮತಗಳನ್ನು ಪಡೆದುಕೊಂಡಿದ್ದಾರೆ.
ದ್ವಿ ಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಇನ್ನೊಂದು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಪೈಪೋಟಿ ನಡೆಸಿದ್ದಾರೆ. ಸದ್ಯ ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರು ಎರಡನೇ ಸ್ಥಾನದಲ್ಲಿದ್ದಾರೆ.
ಪ್ರದೀಪ್ ಶೆಟ್ಟರ್ ಅವರು 1885 ಮತಗಳನ್ನು ಪಡೆದುಕೊಂಡಿದ್ದಾರೆ.
Kshetra Samachara
14/12/2021 12:58 pm