ಹುಬ್ಬಳ್ಳಿ- ಸುಮಾರು ವರ್ಷಗಳಿಂದ ಸಮಸ್ಯೆ ಹೇಳಿಕೊಂಡು, ಪ್ರತಿಭಟನೆ ಮಾಡುತ್ತಾ ಬಂದರೂ ಅಂಗನವಾಡಿ ಕಾರ್ಯಕರ್ತರಿಗೆ ಮಾತ್ರ, ಸರ್ಕಾರ ಕಣ್ಣು ತೆರೆದು ನೋಡುತ್ತಿಲ್ಲ. ಈ ಹಿನ್ನಲೆಯಲ್ಲಿ ಇದೇ 17ರಂದು ಬೆಳಗಾವಿ ಚಲೋ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತರ ಸಂಘಟನೆಯ ಮುಖ್ಯಸ್ಥರಾದ ನೂರಜಾನ ಸಮುದ್ರಿ ಹೇಳಿದರು.
ಅಂಗನವಾಡಿ ಸಿಬ್ಬಂದಿ ಸಾಕಷ್ಟು ಸಮಸ್ಯೆಗಳನ್ನು ಹೊತ್ತುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಈ ಬಗ್ಗೆ ಸುಮಾರು ಸಾರಿ ಮನವಿ ಮಾಡಿದರು. ಯಾವುದೇ ಸರ್ಕಾರವಾಗಲಿ, ಜನಪ್ರತಿನಿಧಿಗಳಾಗಲಿ ಕಿಂಚಿತ್ತೂ ಕಾಳಜಿ ವಹಿಸಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಸರ್ಕಾರಕ್ಕೆ ಅಂಗನವಾಡಿ ಸಿಬ್ಬಂದಿಯ ಸಮಸ್ಯೆ ಕುರಿತು ಎಳೆ ಎಳೆಯಾಗಿ ಬಿಡಿಸಿಟ್ಟು ಮನವಿ ಮಾಡಿದ್ದೇವೆ. ಆದರೆ ಪ್ರಯೋಜನವಾಗಿಲ್ಲ. ಆದ್ದರಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನಕ್ಕೆ ಭೇಟಿ ನೀಡಿ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಲಾಗುತ್ತದೆ. ಕೂಡಲೇ ಸಮಸ್ಯೆಗಳನ್ನು ಬಗೆಹರಿಸಿ ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
Kshetra Samachara
14/12/2021 03:13 pm