ಧಾರವಾಡ: ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವೇನೋ ಸಾಧಿಸಿದ್ದಾರೆ. ಆದರೆ, ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಬಿಜೆಪಿಗಿಂತ ಹೆಚ್ಚು ಮತಗಳನ್ನು ಪಡೆದು ಗೆಲುವು ದಾಖಲಿಸಿದ್ದಾರೆ ಎಂಬುದು ಇಲ್ಲಿ ಗಮನಾರ್ಹ ಸಂಗತಿ.
ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳನ್ನೊಳಗೊಂಡು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ತಲಾ ಒಬ್ಬರನ್ನು ಕಣಕ್ಕಿಳಿಸಿತ್ತು. ಕಾಂಗ್ರೆಸ್‌ನಿಂದ ಸಲೀಂ ಅಹ್ಮದ್ ಹಾಗೂ ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಸಹೋದರ ಪ್ರದೀಪ್ ಶೆಟ್ಟರ್ ಸ್ಪರ್ಧೆ ನಡೆಸಿದ್ದರು. ಈ ಎರಡೂ ಕ್ಷೇತ್ರಗಳನ್ನು ಬಿಜೆಪಿ, ಕಾಂಗ್ರೆಸ್ ಸಮನಾಗಿ ಹಂಚಿಕೊಂಡಿವೆ. ಪ್ರದೀಪ್ ಶೆಟ್ಟರ್ ಗೆಲುವು ಕೂಡ ದಾಖಲಿಸಿದ್ದಾರೆ. ಆದರೆ, ಆಡಳಿತಾರೂಢ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಸಹೋದರರಾಗಿ ಪ್ರದೀಪ್ ಶೆಟ್ಟರ್ ಅವರು ಕಾಂಗ್ರೆಸ್ ಅಭ್ಯರ್ಥಿಗಿಂತ ಕಡಿಮೆ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆ ಗಂಟೆ ಎಂದೇ ಹೇಳಲಾಗುತ್ತಿದೆ.
ಪ್ರದೀಪ್ ಶೆಟ್ಟರ್ ಪ್ರಥಮ ಪ್ರಾಶ್ಯಸ್ತ್ಯದಲ್ಲೇ ಆಯ್ಕೆ ಆದರೂ ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮತಗಳನ್ನು ಪಡೆದುಕೊಂಡಿದ್ದಾರೆ. ಇವರಿಗಿಂತ ಕಾಂಗ್ರೆಸ್ ಅಭ್ಯರ್ಥಿ 837 ಮತಗಳನ್ನು ಹೆಚ್ಚಿಗೆ ಪಡೆದುಕೊಂಡು ಬಿಜೆಪಿಗೆ ಎಚ್ಚರಿಗೆ ಸಂದೇಶ ರವಾನೆ ಮಾಡಿದ್ದಾರೆ. ಪ್ರದೀಪ್ ಶೆಟ್ಟರ್ ಅವರು ವಿಧಾನ ಪರಿಷತ್ ಸದಸ್ಯರಾದರೂ ಯಾವ ಗ್ರಾಮ ಪಂಚಾಯ್ತಿಗೂ ಭೇಟಿ ನೀಡಿಲ್ಲ. ಪ್ರಚಾರಕ್ಕೂ ಬಂದಿಲ್ಲ ಎಂಬ ಆರೋಪ ಇತ್ತು. ತಮ್ಮ ಅವಧಿಯಲ್ಲಿ ಪ್ರದೀಪ್ ಶೆಟ್ಟರ್ ಮಾಡಿದ ಕೆಲಸ ಶೂನ್ಯ ಎಂಬ ಆರೋಪ ಕೇಳಿ ಬರುತ್ತಲೇ ಇತ್ತು. ಹೀಗಾಗಿ ಪ್ರಸಕ್ತ ವರ್ಷದ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರಥಮ ಪ್ರಾಶ್ಯಸ್ತ್ಯದ ಮತ ನೀಡಿದ್ದರೂ ಬಿಜೆಪಿಗಿಂತ ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿದ್ದಾರೆ. ಹೀಗಾಗಿ ಈ ಚುನಾವಣೆ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ.
Kshetra Samachara
14/12/2021 08:59 pm