ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಯ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.17ರಂದು ಬೆಳಗಾವಿ ಸುವರ್ಣ ಸೌಧ ಎದುರು ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸಲಾಗುವದು ಎಂದು ವಾಯುವ್ಯ ಸಾರಿಗೆ ಹೋರಾಟ ಸಮಿತಿ ಗೌರವಾಧ್ಯಕ್ಷ್ಯ ಪಿ.ಎಚ್.ನೀರಲಕೇರಿ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ಅನಾವಶ್ಯಕವಾಗಿ ಕಿರುಕುಳ ನೀಡಲಾಗುತ್ತಿದೆ. ಇದರಿಂದ ಕೆಲಸ ಮಾಡದಂತ ಸ್ಥಿತಿ ನಿರ್ಮಾಣವಾಗಿದ್ದು, ಮುಷ್ಕರದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಿಬ್ಬಂದಿಯನ್ನು ಮರು ನೇಮಕ ಮಾಡಲಾಗಿದೆ. ಆದರೆ ಮುಷ್ಕರದಲ್ಲಿ ಪಾಲ್ಗೊಂಡ 10 ಸಾವಿರ ನೌಕರರಿಗೆ ದಂಡ ಹಾಕಿದ್ದಾರೆ. ಪ್ರತಿಯೊಬ್ಬರಿಗೆ 10 ಸಾವಿರದಷ್ಟು ದಂಡ ಹಾಕಿದ್ದಾರೆ. ಕೇವಲ 10-12 ಸಾವಿರ ದಂಡ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ದಂಡಾರ್ಹ ಪ್ರಹಾರ ನಿಲ್ಲಿಸಬೇಕು. ಹಾಕಿದ ದಂಡದಲ್ಲಿಯೇ ಕೆ.ಎಸ್.ಆರ್.ಟಿ.ಸಿ ನಡೆಸುತ್ತಿದ್ದಾರೆ ಎಂಬ ಅನುಮಾನ ಕಾಡುತ್ತಿದೆ ಎಂದು ಆರೋಪಿಸಿದರು.
ಮುಷ್ಕರ ಹೆಸರಿನಲ್ಲಿ ಹಾಕಿದ ದಂಡವನ್ನು ಮರುಪಾವತಿ ಮಾಡಬೇಕು. 7 ನೇ ವೇತನ ಆಯೋಗವನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ಡಿ. 17 ರಂದು ಸುವರ್ಣಸೌಧ ಎದುರು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವದು ಎಂದರು.
Kshetra Samachara
15/12/2021 12:42 pm