ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಮ್ಮ ಅಪ್ಪ ಅವಾಗಲೇ ಶ್ರೀಮಂತ: ನಮಗೆ ಆಸ್ತಿ ಮಾಡುವ ಅವಶ್ಯಕತೆ ಇಲ್ಲ ಎಂದ ಕೋನರೆಡ್ಡಿ

ಹುಬ್ಬಳ್ಳಿ: ನಮ್ಮ ಅಪ್ಪ ಬೇಕಾದಷ್ಟು ಆಸ್ತಿ ಮಾಡಿಟ್ಟು ಹೋಗಿದ್ದಾರೆ. ರಾಜಕೀಯಕ್ಕೆ ಬಂದ ಮೇಲೆ ಆಸ್ತಿ ಮಾಡುವ ಅವಶ್ಯಕತೆ ನನಗಿಲ್ಲ ಎಂದು ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ, ಜೆಡಿಎಸ್ ಮುಖಂಡ ಸುರೇಶ್ ಹಿರೇಮಠ ಆರೋಪಕ್ಕೆ ತಿರಗೇಟು ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ನಾನು ನವಲಗುಂದ‌ ಕ್ಷೇತ್ರದ ಜನತೆಯ ಆಗ್ರಹದ ಮೇರೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಕಾಂಗ್ರೆಸ್ ನಾಯಕರು ಸಹ ನನಗೆ ಉತ್ತಮ ಬೆಂಬಲ ಸೂಚಿಸಿದ್ದಾರೆ. ಇನ್ನು ಧಾರವಾಡದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ನನ್ನ ವಿರೋಧಿಸುವವರಿಗೆ ದೇವರು ಒಳ್ಳೆಯದು ಮಾಡಲಿ. ಇದರಲ್ಲಿ ಬಿಜೆಪಿಯವರ ಕೈವಾಡವಿದೆ. ನಾನು ರೈತನ ಮಗ. ಇಂತಹ ಸಣ್ಣಪುಟ್ಟ ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ ಎಂದರು. ಕಾಂಗ್ರೆಸ್ ನಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತೇನೆ ಎಂದರು.

Edited By : Manjunath H D
Kshetra Samachara

Kshetra Samachara

16/12/2021 11:09 am

Cinque Terre

30.27 K

Cinque Terre

11

ಸಂಬಂಧಿತ ಸುದ್ದಿ