ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಮಾರಸ್ವಾಮಿ ಹುಟ್ಟು ಹಬ್ಬ: 101 ತೆಂಗಿನಕಾಯಿ ಒಡೆದ ಜೆಡಿಎಸ್ ಕಾರ್ಯರ್ತರು

ಧಾರವಾಡ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಪ್ರಯುಕ್ತ ಧಾರವಾಡದಲ್ಲಿ ಜೆಡಿಎಸ್ ಕಾರ್ಯಕರ್ತರು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ 101 ತೆಂಗಿನಕಾಯಿ ಒಡೆದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ನೇತೃತ್ವದಲ್ಲಿ ಧಾರವಾಡದ ಕೆಸಿಡಿ ವೃತ್ತದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ 101 ತೆಂಗಿನಕಾಯಿಗಳನ್ನು ಒಡೆಯಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗುರುರಾಜ ಹುಣಸಿಮರದ, ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಕುಮಾರಸ್ವಾಮಿ ನೇತೃತ್ವದಲ್ಲಿ ಬಲಗೊಳ್ಳಲಿದೆ ಎಂದರು.

ಇನ್ನು ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಕೋನರಡ್ಡಿ ಸಾಕಷ್ಟು ಪಕ್ಷಗಳನ್ನು ಬದಲಾವಣೆ ಮಾಡುತ್ತ ಬಂದಿದ್ದಾರೆ. ಈಗ ಅವರು ಜೀವ ಇಲ್ಲದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದರು.

Edited By : Manjunath H D
Kshetra Samachara

Kshetra Samachara

16/12/2021 12:40 pm

Cinque Terre

32.89 K

Cinque Terre

7

ಸಂಬಂಧಿತ ಸುದ್ದಿ