ಧಾರವಾಡ: ಲವ್ ಜಿಹಾದ್, ಮತಾಂತರ ತಡೆ, ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆ ಮಾಡುವುದನ್ನು ತಡೆಯಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಪ್ರಮುಖ ವೃತ್ತಗಳ ಮೂಲಕ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಅಲ್ಲಿ ಕೆಲಹೊತ್ತು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿಶ್ವ ಹಿಂದೂ ಪರಿಷತ್, ಭಜರಂಗದಳ ಸೇರಿದಂತೆ ವಿವಿಧ ಮಠಾಧೀಶರು, ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿದವು.
ಲವ್ ಜಿಹಾದ್, ಮತಾಂತರ, ಗೋಹತ್ಯೆ ನಿಷೇಧದಂತ ಕಾನೂನನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Kshetra Samachara
17/12/2021 07:35 pm