ಕುಂದಗೋಳ : ಇಎಂಎಸ್ ಸಂಘಟನೆ ಹಾಗೂ ಶಿವಸೇನೆ ಮೊನ್ನೆ ತಾನೇ ಕರ್ನಾಟಕ ನಾಡ ಧ್ವಜ ಸುಟ್ಟು ಧ್ವಂಸ ಮಾಡಿರುವ ಘಟನೆ ಮಾಸುವ ಮುನ್ನವೇ ಮತ್ತೇ ಕ್ರಾಂತಿಕಾರಿ ಸಂಗೋಳ್ಳಿ ರಾಯಣ್ಣನ ಮೂರ್ತಿಗೆ ಹಾನಿ ಮಾಡಿ ಪುಂಡಾಟ ಮೆರೆದಿದ್ದಾರೆ ಈ ಬಗ್ಗೆ ಕರ್ನಾಟಕ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ ಕಚೇರಿ ಎದುರು ಧರಣಿ ನಡೆಸಿದರು.
ಕರವೇ ತಾಲೂಕು ಅಧ್ಯಕ್ಷ ಕಲ್ಲಪ್ಪ ಹರಕುಣಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಶಿವಸೇನೆ ಹಾಗೂ ಇ.ಎಂ.ಎಸ್ ಕಾರ್ಯಕರ್ತರು ಅಟ್ಟಹಾಸ ಅತಿರೇಕಕ್ಕೆ ಎರಿದ್ದರೂ ರಾಜಕಾರಣಿಗಳು ಸುಮ್ಮನಿರುವುದು ಸರಿಯಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಮೂಲಕ ತಹಶೀಲ್ದಾರಗೆ ಮನವಿ ಸಲ್ಲಿಸಿದರು.
Kshetra Samachara
20/12/2021 08:00 pm