ಅಣ್ಣಿಗೇರಿ: ಪಟ್ಟಣದ ಪುರಸಭೆ ಚುನಾವಣೆಯ ಅಂಗವಾಗಿ ಧಾರವಾಡ ಜಿಲ್ಲಾ ಬಿಜೆಪಿ ಗ್ರಾಮಾಂತರ ಘಟಕದಿಂದ ವತಿಯಿಂದ ಅಣ್ಣಿಗೇರಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ 23 ವಾರ್ಡ್ಗಳಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಜರುಗಿತು. ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಸೇರಿ ದೀಪ ಬೆಳಗಿಸುವ ಮುಖಾಂತರ ಉದ್ಘಾಟನೆ ಮಾಡಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಜಗದೀಶ್ ಶೆಟ್ಟರ್ ಮಾತನಾಡಿ ನಾನು ಮುಖ್ಯಮಂತ್ರಿ ಇದ್ದ ಸಮಯದಲ್ಲಿ ಅಣ್ಣಿಗೇರಿ ಹೊಸ ತಾಲೂಕು ಎಂದು ಘೋಷಣೆ ಮಾಡಿರುತ್ತೇನೆ, ಪಟ್ಟಣಕ್ಕೆ ವಿಶೇಷ ತಶಿಲ್ದಾರ ನೇಮಕ, ನೋಂದಣಿ ಕಚೇರಿ, ಮಾಡಿರುತ್ತೇವೆ. ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪಟ್ಟಣಕ್ಕೆ ಸರ್ಕಾರದಿಂದ ಬರುವ ಕಚೇರಿಗಳನ್ನು ತೆರೆಯಲಾಗುವುದು ಎಂದು ಹೇಳಿ, ಬಿಜೆಪಿ ಅಭ್ಯರ್ಥಿಗಳು ಗೆಲ್ಲಿಸಿ ತರಬೇಕೆಂದು ವಿನಂತಿ ಮಾಡಿದರು.
ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತನಾಡಿ. ಈಗಾಗಲೇ ಅಣ್ಣಿಗೇರಿ ಪಟ್ಟಣ ನಮ್ಮ ಸರಕಾರದ ಅವಧಿಯಲ್ಲಿ ಸಾಕಷ್ಟ ಅಭಿವೃದ್ಧಿ ಆಗಿದೆ. ಮೊದಲಿನ ಅಣ್ಣಿಗೇರಿ ಪಟ್ಟಣ ಈಗಿನ ಪಟ್ಟಣ ಯಾವ ರೀತಿ ಕೆಲಸವಾಗಿದೆ ಎಂದು ತಿಳಿಯುತ್ತದೆ. ಇನ್ನು ಬರುವ ದಿನಗಳಲ್ಲಿ ಪಟ್ಟಣಕ್ಕೆ 24/7 ಕುಡಿಯುವ ನೀರಿನ ವ್ಯವಸ್ಥೆ, ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸುವುದು, ತಾಲೂಕು ಕಚೇರಿಯ ಹೊಸ ಕಟ್ಟಡವನ್ನು ತೆರೆಯುವುದು,ಹಲವಾರು ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ. ಪಟ್ಟಣದಲ್ಲಿ ಏಳಿಗೆಗಾಗಿ 23 ವಾರ್ಡಗಳ ಅಭ್ಯರ್ಥಿಗಳನ್ನು ಗೆಲ್ಲಿಸಿ ತರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಗ್ರಾಮಾಂತರ ಅಧ್ಯಕ್ಷರಾದ ಬಸವರಾಜ ಕುಂದಗೋಳ ಮಠ, ಈರಣ್ಣ ಜಡಿ, ಷಣ್ಮುಖ ಗುರಿಕಾರ್,ದಾನಪ್ಪ ಗೌಡರ್, ಹಾಗೂ ಬಿಜೆಪಿಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
21/12/2021 04:59 pm