ಹುಬ್ಬಳ್ಳಿ- ಎಂಇಎಸ್ ಹಾಗೂ ಶಿವಸೇನೆ ಪಕ್ಷಗಳನ್ನು ನಿಷೇಧ ಮಾಡುವಂತೆ ಆಗ್ರಹಿಸಿ, ಕರ್ನಾಟಕ ನವ ನಿರ್ಮಾಣ ವೇದಿಕೆ ವತಿಯಿಂದ ನಗರದ ತಹಶೀಲ್ದಾರ ಕಚೇರಿ ಮುಂದೆ ಪ್ರತಿಭಟನೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಈ ಪುಂಡರ ಹಾವಳಿ ಹೆಚ್ಚಾಗಿದ್ದು, ಕೂಡಲೆ ಎಂಇಎಸ್ ಹಾಗೂ ಶಿವಸೇನೆಯನ್ನು ರಾಜ್ಯದಿಂದ ಬ್ಯಾನ್ ಮಾಡುವಂತೆ, ತಹಶೀಲ್ದಾರರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಈರಪ್ಪ ಕೆ ಎಮ್ಮಿ, ರಾಮಚಂದ್ರ ಕುಲಕರ್ಣಿ ಸೇರಿದಂತೆ ಇತರರು ಭಾಗವಹಿಸಿದ್ದರು.
Kshetra Samachara
22/12/2021 03:59 pm