ಹುಬ್ಬಳ್ಳಿ: ಪಕ್ಷ ಸಂಘಟನೆ ಹಾಗೂ ಪಕ್ಷದ ಬಲವರ್ಧನೆಗಾಗಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಡಿ. 28, 29 ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ 10 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ನಡೆದಿತ್ತು.ಆಗಲೂ ಸಹ ನಡೆದ ಕಾರ್ಯಕ್ರಮ ಬಹಳ ಅದ್ಭುತವಾಗಿ ಆಗಿತ್ತು. ಆದ್ರೆ ಇತ್ತೀಚಿಗೆ ಕೋವಿಡ್ ಕಾರಣದಲ್ಲಿ ಕಾರ್ಯಕಾರಿಣಿ ಮಾಡಲು ಆಗಲಿಲ್ಲ.
ಮಂಗಳೂರಿನ ನಂತರ ಬೆಳಗಾವಿ, ಶಿವಮೊಗ್ಗ, ದಾವಣಗೆರೆಯಲ್ಲಿ ನಡೆದಿದೆ. ಇದೀಗ ಹುಬ್ಬಳ್ಳಿಯಲ್ಲೂ ಸಹ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ನಡೆಸಲಾಗುವದು ಎಂದಿದ್ದಾರೆ.
Kshetra Samachara
24/12/2021 02:08 pm