ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅವಳಿನಗರದಲ್ಲಿ ಬಿಜೆಪಿ ಬಾವುಟದ ಕಲರವ:ನಗರದ ಸೌಂದರ್ಯಕ್ಕೆ ಎಲ್ಲಿದೆ ಬೆಲೆ...!

ಹುಬ್ಬಳ್ಳಿ: ಹತ್ತು ವರ್ಷಗಳ ಬಳಿಕ ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಭರದ ಸಿದ್ಧತೆ ನಡೆದಿದ್ದು, ನಗರದೆಲ್ಲೆಡೆ ಬಿಜೆಪಿ ಬಾವುಟ ಸೇರಿದಂತೆ ಗಣ್ಯರ ಸ್ವಾಗತಕ್ಕೆ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ.

ಹೌದು.. ಇಲ್ಲಿಯ ಚನ್ನಮ್ಮ ವೃತ್ತ, ಹೊಸೂರ ಸರ್ಕಲ್, ಕ್ಲಬ್ ರೋಡ್, ಲ್ಯಾಮಿಂಗ್ಟನ್ ರಸ್ತೆ, ಗೋಕುಲ್ ರಸ್ತೆ, ಸ್ಟೇಷನ್ ರಸ್ತೆ ಸೇರಿದಂತೆ ಬಹುತೇಕ ರಸ್ತೆಗಳಲ್ಲಿ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯ ಉಸ್ತುವಾರಿ ಅರುಣಸಿಂಗ್, ಕೇಂದ್ರ ಸಚಿವರಾದ ರಾಜೀವ ಚಂದ್ರಶೇಖರ, ಪ್ರಹ್ಲಾದ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಂ ಜಗದೀಶ ಶೆಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನಕುಮಾರ ಕಟೀಲ್ ಸೇರಿದಂತೆ ನೂರಾರು ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಸ್ವಚ್ಛತಾ ಕಾರ್ಯವೂ ಭರದಿಂದ ನಡೆದಿವೆ.

ಇನ್ನೊಂದೆಡೆ ಜಿಲ್ಲೆಯ ಬಿಜೆಪಿ ಮುಖಂಡರು ಸೇರಿದಂತೆ ಗಣ್ಯರ ನೇತೃತ್ವದಲ್ಲಿ ನಿರಂತರ ಸರಣಿ ಪೂರ್ವಭಾವಿ ಸಭೆಗಳನ್ನು ನಡೆಸಿ ಕಾರ್ಯಕ್ರಮದ ರೂಪರೇಷೆಗಳ ಜಾರಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಿಎಂ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ನಿರಂತರ ಸಭೆಗಳನ್ನು ನಡೆಸಿ ಮಾರ್ಗದರ್ಶನ ನೀಡಿ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಹುಮ್ಮಸ್ಸು ತುಂಬಲಾಗುತ್ತಿದೆ. ವಿಶೇಷ ತಂಡಗಳನ್ನು ರಚಿಸಿ ಗಣ್ಯರಿಗೆ ಸ್ವಾಗತ, ಆತಿಥ್ಯ ನೀಡಲು ಸಿದ್ಧತೆ ಮಾಡಲಾಗುತ್ತಿದೆ.

Edited By : Nagesh Gaonkar
Kshetra Samachara

Kshetra Samachara

27/12/2021 03:29 pm

Cinque Terre

17.37 K

Cinque Terre

6

ಸಂಬಂಧಿತ ಸುದ್ದಿ