ಹುಬ್ಬಳ್ಳಿ: ನಮ್ಮ ಹುಬ್ಬಳ್ಳಿ ಚೆನ್ನಮ್ಮ ವೃತ್ತ ಅಂದರೆ ಎಲ್ಲರಿಗೂ ಗೌರವಪೂರ್ವಕವಾದಂತ ಭಾವನೆ ಬರುತ್ತದೆ. ಆದರೆ ನಮ್ಮ ರಾಜಕೀಯ ಪಕ್ಷಗಳು ಮಾತ್ರ ಇಂತಹ ಮಹಾನ್ ವ್ಯಕ್ತಿಗಳನ್ನು ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುವುದು ಸಾಮಾನ್ಯವಾಗಿದೆ.
ಹೌದು.. ನಾಳೆ ಹಾಗೂ ನಾಡಿದ್ದು, ನಡೆಯುವ ಬಿಜೆಪಿ ಕಾರ್ಯಕಾರಣಿ ಸಭೆಯ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ತುಂಬಾ ಬಿಜೆಪಿ ಬ್ಯಾನರ್ ರಾರಾಜಿಸುತ್ತಿವೆ. ಆದರೆ ನಮ್ಮ ಬಿಜೆಪಿ ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿಯೇ ಬಿಜೆಪಿ ಬಾವುಟವನ್ನು ನೆಟ್ಟು ರಾಜಕೀಯ ಪ್ರಚಾರ ಗಿಟ್ಟಿಸಿಕೊಳ್ಳುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ರಾಜಕೀಯ ಪಕ್ಷಕ್ಕೆ ಸೀಮಿತವಾಗುವಂತೆ ಮಾಡುತ್ತಿದ್ದಾರೆ.
ಅವಳಿನಗರದ ತುಂಬಾ ಸಾಕಷ್ಟು ಪ್ಲೇಕ್ಸ್ ಬ್ಯಾನರ್ ಹಾಕಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಚೆನ್ನಮ್ಮ ವೃತ್ತದಲ್ಲಿಯೇ ಇಂತಹದೊಂದು ಕೆಲಸಕ್ಕೆ ಕೈ ಹಾಕಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುವಂತೆ ಮಾಡಿದೆ.
Kshetra Samachara
27/12/2021 06:13 pm