ಹುಬ್ಬಳ್ಳಿ: ಸತತ 10 ವರ್ಷಗಳ ನಂತರ ಉತ್ತರ ಕರ್ನಾಟಕದ ಹೆಬ್ಬಾಗಿಲು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿಗೆ ಸಜ್ಜುಗೊಂಡಿದ್ದು, ಕಮಲ ಪಡೆಯ ನಾಯಕರ ಆಗಮನಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.
ಇಂದು ಮತ್ತು ನಾಳೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಗೆ ಸಕಲ ಸಿದ್ಧತೆ ನಡೆದಿದ್ದು, ಇಡೀ ನಗರ ಕೇಸರೀಮಯವಾಗಿ ರಾರಾಜಿಸುತ್ತಿದೆ. ಸತತ 10 ವರ್ಷಗಳ ನಂತರ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ನಿರ್ಧರಿಸಿದ್ದು, ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕಾರಿಣಿ ಸಭೆಗೆ ಕೇಸರಿ ಪಡೆಯ ದಂಡೇ ಹುಬ್ಬಳ್ಳಿಗೆ ಆಗಮಿಸಲಿದೆ. ಇನ್ನು 28 ಹಾಗೂ 29 ಎರಡು ದಿನಗಳ ಕಾಲ ನಡೆಯಲಿರೋ ಈ ರಾಜ್ಯ ಕಾರ್ಯಕಾರಿಣಿ ಸಭೆ ಹಿನ್ನೆಲೆ ಇಡೀ ವಾಣಿಜ್ಯ ನಗರಿ ಹುಬ್ವಳ್ಳಿ ಕೇಸರಿಮಯವಾಗಿ ರಾರಾಜಿಸುತ್ತಿದೆ.
ನಗರದ ಡೆನಿಸನ್ಸ್ ಹೊಟೆಲ್ ನಲ್ಲಿಆಯೋಜಿಸಿರುವ ಈ ಕಾರ್ಯಕಾರಿಣಿ ಸಭೆಯ ಉದ್ದೇಶದಿಂದ ನಗರದ ಗೋಕುಲ ರಸ್ತೆ, ಚೆನ್ನಮ್ಮ ವೃತ್ತ, ಕ್ಲಬ್ ರಸ್ತೆ, ಸ್ಟೇಶನ್ ರಸ್ತೆ ಸೇರಿದಂತೆ ನಗರದ ತುಂಬೆಲ್ಲ ಬಿಜೆಪಿ ಸಕಲಸಿದ್ಧತೆಗಳನ್ನ ಕೈಗೊಂಡಿದ್ದು ರಸ್ತೆಯುದ್ದಕ್ಕೂ ನಾಯಕರ ಸ್ವಾಗತಕ್ಕೆ ಸ್ವಾಗತ ಕಮಾನು, ಬಿಜೆಪಿಯ ಬಾವುಟಗಳು ರಾರಾಜಿಸುತ್ತಿವೆ.
ಇನ್ನೂ ರಾಜ್ಯ ಉಸ್ತುವಾರಿ ಅರುಣಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಡಿ.ಕೆ. ಅರುಣಾ, ಮಾಜಿ ಸಿಎಂ ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಬಿಜೆಪಿ ನಾಯಕರು ಸೇರಿದಂತೆ ಪಕ್ಷದ ಮುಖಂಡರು ಈ ಸಭೆಯಲ್ಲಿ ಭಾಗಿಯಾಗುವ ಮೂಲಕ ಹಲವು ಪ್ರಮುಖ ವಿಷಯಗಳ ಚರ್ಚೆಗೆ ಮುಂದಾಗಲಿದ್ದಾರೆ.
Kshetra Samachara
28/12/2021 10:59 am