ಹುಬ್ಬಳ್ಳಿ : ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಕೊರೋನಾದಿಂದ ಬಹಳಷ್ಟು ವಿಳಂಬವಾಗಿದ್ದು, ಇದೀಗ ದೇಶದ ಜನತೆಗೆ ಸ್ಪಷ್ಟವಾದ ಸಂದೇಶ ಕೊಡುವ ಉದ್ದೇಶದಿಂದ ಮತ್ತು ಮುಂದಿನ ಕಾರ್ಯಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿವೆ ಎಂದು ಸಚಿವ ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನೇಕ ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿವೆ. ಇನ್ನೂ ರಾಜ್ಯದಲ್ಲಿ ಒಂದು ವರ್ಷ ಮೂರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಕೆಲಸ ಕಾರ್ಯಗಳು ಯೋಜನೆಗಳು ಅಭಿವೃದ್ಧಿ ಹೆಜ್ಜೆಗಳ ಬಗ್ಗೆ ದೇಶದ ರಕ್ಷಣೆ ಬಗ್ಗೆ ಎಲ್ಲ ವಿಷಯಗಳನ್ನು ಸಭೆಯಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
Kshetra Samachara
28/12/2021 12:43 pm