ಹುಬ್ಬಳ್ಳಿ : ಇಂದು ಬಿಜೆಪಿ ರಾಜ್ಯ ಕಾರ್ಯಕಾರಣಿಯನ್ನು ನಗರದ ಖಾಸಗಿ ಹೊಟೇಲನಲ್ಲಿ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಾಧನೆಯ ಕುರಿತು ಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಬಿಜೆಪಿ ನಾಯಕರು ಸಕಲ ವಾದ್ಯಗಳೊಂದಿಗೆ, ಮಹಿಳೆಯರು ಕುಂಭ ಹೊತ್ತುಕೊಂಡು ಹೋಗುವುದರ ಮೂಲಕ ಚಾಲನೆ ನೀಡಿದರು.
ಚಿತ್ರ ಪ್ರದರ್ಶನವನ್ನು ಬಿಜೆಪಿ ಸಾಧನೆಯನ್ನು, ರಾಜ್ಯ ಉಸ್ತುವಾರಿ ಅರುಣ ಸಿಂಗ್, ಹಾಗೂ ನಳೀನ್ ಕುಮಾರ್ ಕಟೀಲು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಗೋವಿಂದ್ ಕಾರಜೋಳ, ಜಗದೀಶ್ ಶೆಟ್ಟರ್, ಡಿ.ಕೆ.ಅರುಣಾ, ಮಹೇಶ ತೆಂಗಿನಕಾಯಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
Kshetra Samachara
28/12/2021 12:48 pm