ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವರಿಷ್ಠರ ನಂಬಿಕೆಯಂತೆ ಕೆಲಸ ಮಾಡುತ್ತೇನೆ: 2023ರ ಚುನಾವಣೆಯಲ್ಲಿ ಜಯದ ಭರವಸೆ ನೀಡಿದ ಸಿಎಂ

ಹುಬ್ಬಳ್ಳಿ: 2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೆ ನನ್ನ ಗುರಿ. ಇವಾಗಿನಿಂದಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಸ್ಟಾರ್ಟ್ ಮಾಡುತ್ತೇನೆ. ಅರುಣ್ ಸಿಂಗ್ ಸೇರಿದಂತೆ ಕೇಂದ್ರದ ವರಿಷ್ಠರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ‌. ಅವರಿಗೆ ಅದಕ್ಕಾಗಿ ಧನ್ಯವಾದ ಹೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಹಾಗೂ ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತದೆ. ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ಕೈಗೊಳ್ಳಲಾಗುತ್ತದೆ ಎಂದರು.

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನಾನು ಪ್ರತಿಕ್ರಿಯೇ ನೀಡಲ್ಲ. ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತದೆ ಎಂದು ಅವರು ಹೇಳಿದರು.

ಸಿಎಂ ವಿಶ್ರಾಂತಿ ಪಡೆದು ಕೆಲಸ‌ ಮಾಡಲಿ ಎನ್ನುವ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಎಂ.ಪಿ ಕುಮಾರಸ್ವಾಮಿಗೆ ನನ್ನ ಮೇಲೆ ಬಹಲ ಪ್ರೀತಿ ಇದೆ. ವರ್ಷಪೂರ್ತಿ ದಿನಾಲು 15 ಗಂಟೆ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎನ್ನುವ ಅರುಣ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ನಮ್ಮದೇ ಆದ ತಂಡ ಇದೆ. ನಾವೆಲ್ಲಾ ಸೇರಿ ಸಾಮೂಹಿಕವಾಗಿ ಚುನಾವಣೆ ಎದುರಿಸುತ್ತೆವೆ ಎಂದರು.

ಬಿಡಿಎ ಭ್ರಷ್ಟಾಚಾರ ಎಸಿಬಿ ಕೇಸ್ ವಿಚಾರವಾಗಿ ಮಾತನಾಡಿದ ಅವರು, ಕೆಲವೊಂದು ಅಂತರಿಕ ಪ್ರಸ್ತಾವನೆ ಕೇಳಿದ್ದಾರೆ. ಅನುಮತಿ ಸಿಕ್ಕ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸರಾಜ ಬೊಮ್ಮಾಯಿ ಹೇಳಿದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/12/2021 03:20 pm

Cinque Terre

41.33 K

Cinque Terre

4

ಸಂಬಂಧಿತ ಸುದ್ದಿ