ಧಾರವಾಡ: ಧಾರವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯನಗೌಡ ಬಣದ ಕಾರ್ಯಕರ್ತರು ಎಂಇಎಸ್ ವಿರುದ್ಧ ಪ್ರತಿಭಟನೆ ನಡೆಸಿದರು.
ಎಂಇಎಸ್ ಪುಂಡಾಟಿಕೆ ವಿರೋಧಿಸಿ ಹಾಗೂ ಆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ರುದ್ರೇಶ ಹವಳದ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿತ್ತು. ಜಿಲ್ಲಾಧಿಕಾರಿ ಕಚೇರಿಯ ಗೇಟ್ ಹತ್ತಿದ ಕಾರ್ಯಕರ್ತರು ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.
Kshetra Samachara
28/12/2021 04:28 pm