ಹುಬ್ಬಳ್ಳಿ - ಈ ಸಭೆಯಲ್ಲಿ ನಾಯಕತ್ವದ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆ ಆಗಿಲ್ಲ. 2023 ರ ವರೆಗೂ ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಾಧನೆ ಬಗ್ಗೆ ಚರ್ಚೆಯಾಗಿದೆ. ನಿರ್ಣಯ ಮಂಡನೆ, ಸರ್ಕಾರದ ಸಾಧನೆ ಇತ್ಯಾದಿ ಚರ್ಚೆ ನಡೆದಿದೆ.
ಮತಾಂತರ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ಸಿಎಂಗೆ ಅಭಿನಂದನೆ ಸಲ್ಲಿಸಲಾಗಿದೆ ಸಿಎಂ ಬದಲಾವಣೆ ಕೇವಲ ಊಹಾಪೋಹ, ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ. ಯಾರೂ ಸಹ ಈ ಬಗ್ಗೆ ಮಾತನಾಡುವಂತಿಲ್ಲ, ಯಾರೂ ಸಹ ಹೇಳಿಕೆ ನೀಡುವಂತಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/12/2021 08:09 am