ಹುಬ್ಬಳ್ಳಿ: ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ನಿರ್ಣಯ ಕೈಗೊಂಡ ಕಾರ್ಯಕಾರಿಣಿ ಸಮಿತಿ ಸದಸ್ಯರಿಗೆ ಧನ್ಯವಾದ. ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮುನ್ನಡೆಯಿರಿ ಎಂದು ಬೆನ್ನುತಟ್ಟಿದ್ದಾರೆ. ಬಿಜೆಪಿ ವರಿಷ್ಠರಿಗೆ ರಾಜ್ಯ ಕಾರ್ಯಕಾರಣಿ ಸದಸ್ಯರಿಗೆ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿಯವರು ಧನ್ಯವಾದ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪಕ್ಷ ಬಲಿಷ್ಠವಾಗಬೇಕೆಂಬ ಅವರ ನಿರೀಕ್ಷೆಯನ್ನು ಹುಸಿಗೊಳಿಸಲ್ಲ. ಮುಂಬರುವ ಚುನಾವಣೆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋಗಬೇಕೆಂಬ ಅವರ ನಿರೀಕ್ಷೆಯನ್ನು ಸಾಕಾರ ಮಾಡುತ್ತೇವೆ. ಕಾರ್ಯಕಾರಿಣಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಅರುಣ್ ಸಿಂಗ್ ಮತ್ತು ಕಟೀಲ್ ನೇತೃತ್ವದಲ್ಲಿ ಕಾರ್ಯಕಾರಿಣಿ ಯಶಸ್ವಿಯಾಗಿ ನಡೆಯುತ್ತಿದೆ ಎಂದರು.
ಅರವಿಂದ ಬೆಲ್ಲದ ಮಹಾನಗರ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿರುವ ವಿಚಾರ ನನಗೆ ಗೊತ್ತಿಲ್ಲ. ಅವರು ಸಿಕ್ಕ ಕೂಡಲೇ ಅದರ ಬಗ್ಗೆ ವಿಚಾರಿಸುತ್ತೇನೆ. ವರಿಷ್ಠರಿಗೆ ಇರುವ ಸ್ಪಷ್ಟತೆಯನ್ನು ಅರುಣ್ ಸಿಂಗ್ ಅವರು ಕಾರ್ಯಕಾರಿಣಿಯಲ್ಲಿ ವ್ಯಕ್ತಪಡಿಸಿದ್ದಾರೆ. ಮೊದಲಿನಿಂದಲೂ ನನ್ನ ಮೇಲೆ ವರಿಷ್ಠರಿಗೆ ವಿಶ್ವಾಸವಿದೆ ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/12/2021 10:32 am