ಹುಬ್ಬಳ್ಳಿ: ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು, ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಒಳಜಗಳ ನಡೆಯುತ್ತಿದೆ. ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನ ಕಾಂಗ್ರೆಸ್ ಮಾಡುತ್ತಿದೆ. ನಾವು ಎರಡು ದಿನಗಳ ಕಾಲ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಾಗೂ ಅವರ ಸಾಧನೆ ಸೇರಿದಂತೆ ಮೋದಿಯವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಲಿದ್ದೇವೆ. ಮುಂದಿನ ಚುನಾವಣೆಯಲ್ಲಿ 150 ಕ್ಕೂ ಅಧಿಕ ಸ್ಥಾನಗಳನ್ನ ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೂ ನಾವೆಲ್ಲ ಸನ್ನದ್ಧರಾಗಿದ್ದೇವೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/12/2021 11:53 am