ವರದಿ : ಬಿ. ನಂದೀಶ್
ಅಣ್ಣಿಗೇರಿ : ಇಲ್ಲಿಯ ಪುರಸಭೆ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್ 13 ಸ್ಥಾನಗಳನ್ನು ತನ್ನ ಮಡಿಲಿಗೆ ಹಾಕಿಕೊಂಡು ಅಧಿಕಾರ ಹಿಡಿಯುವತ್ತ ದಾಪುಗಾಲು ಹಾಕಿದೆ.
ಪ್ರಕಟವಾದ 23 ಸ್ಥಾನಗಳ ಪೈಕಿ ಕಾಂಗ್ರೆಸ್ 13 ಬಿಜೆಪಿಗೆ 4 ಕೇವಲ ಸ್ಥಾನ ಬಂದರೆ ಪಕ್ಷೇತರರು 6ಸ್ಥಾನ ಗೆದ್ದುಕೊಂಡಿದ್ದಾರೆ. ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿದ್ದು, ಸರಳ ಬಹುಮತಕ್ಕೆ 13 ಸ್ಥಾನಗಳ ಅವಶ್ಯಕತೆ ಇತ್ತು , ಕಾಂಗ್ರೆಸ್ 13 ಸ್ಥಾನಗಳನ್ನು ಮಡಿಲಿಗೆ ಹಾಕಿಕೊಂಡು ಸ್ವತಂತ್ರವಾಗಿ ಅಧಿಕಾರದ ಗದ್ದುಗೆ ಏರಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಕ್ಷೇತ್ರದಲ್ಲಿಯೇ ಬಿಜೆಪಿ ಭಾರಿ ಸೋಲನ್ನು ಅನುಭವಿಸಿದ್ದು ಇದರಿಂದ ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ.
Kshetra Samachara
30/12/2021 09:16 am