ಅಣ್ಣಿಗೇರಿ : ಇಲ್ಲಿಯ ಪುರಸಭೆ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್ 12 ಸ್ಥಾನಗಳನ್ನು ತನ್ನ ಮಡಿಲಿಗೆ ಹಾಕಿಕೊಂಡು ಅಧಿಕಾರ ಗದ್ದುಗೆ ಏರಿದೆ.
ಕೇವಲ 5 ಸ್ಥಾನ ಗೆದ್ದಿರುವ ಬಿಜೆಪಿಗೆ ಭಾರಿ ಮುಖಭಂಗವಾಗಿದ್ದು, 11 ಸ್ಥಾನಗಳಲ್ಲಿ ಸ್ಥರ್ಧಿಸಿದ್ದ ಜೆಡಿಎಸ್ ಧೂಳಿಪಟವಾಗಿದೆ.
ಪ್ರಕಟವಾದ 23 ಸ್ಥಾನಗಳ ಪೈಕಿ ಕಾಂಗ್ರೆಸ್ 12 ಬಿಜೆಪಿಗೆ 5 ಕೇವಲ ಸ್ಥಾನ ಬಂದರೆ ಪಕ್ಷೇತರರು 6 ಸ್ಥಾನ ಗೆದ್ದುಕೊಂಡಿದ್ದಾರೆ. ಪುರಸಭೆಯಲ್ಲಿ ಒಟ್ಟು 23 ಸ್ಥಾನಗಳಿದ್ದು, ಸರಳ ಬಹುಮತಕ್ಕೆ 12 ಸ್ಥಾನಗಳ ಅವಶ್ಯಕತೆ ಇತ್ತು , ಕಾಂಗ್ರೆಸ್ 12 ಸ್ಥಾನಗಳನ್ನು ಮಡಿಲಿಗೆ ಹಾಕಿಕೊಂಡು ಸ್ವತಂತ್ರವಾಗಿ ಅಧಿಕಾರ ಹಿಡಿದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಕ್ಷೇತ್ರದಲ್ಲಿಯೇ ಬಿಜೆಪಿ ಭಾರಿ ಸೋಲನ್ನು ಅನುಭವಿಸಿದ್ದು ಇದರಿಂದ ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ.
ಕಳೆದ ಬಾರಿ ಹೆಚ್ಚು ಸ್ಥಾನ ಪಡೆದಿದ್ದ ಜೆಡಿಎಸ್ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಬಿಜೆಪಿ ಜೊತೆ ಕೈ ಜೋಡಿಸಿ ಅಧಿಕಾರ ಹಿಡಿದಿತ್ತು. ಆದರೆ ಈ ಬಾರಿ ನವಲಗುಂದ ಜೆಡಿಎಸ್ ಮಾಜಿ ಶಾಸಕ ಎನ್. ಎಚ್ ಕೋನರಡ್ಡಿ ಕಾಂಗ್ರೆಸ್ ಸೇರಿದ್ದರಿಂದ ಜೆಡಿಎಸ್ ಮತಗಳು ಕಾಂಗ್ರೆಸ್ ಅಭ್ಯರ್ಥಿಗಳ ಪಾಲಾಗಿವೆ.
Kshetra Samachara
30/12/2021 09:40 am