ಹುಬ್ಬಳ್ಳಿ: ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಸಿಕ್ಕಿದೆ ಎಂದು ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.
ಅಣ್ಣಿಗೇರಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ. ಬೇರೆ ಬೇರೆ ನಗರಸಭೆ ಮತ್ತು ಪುರಸಭೆಗಳಲ್ಲಿ ನಮ್ಮ ಸ್ಥಾನಗಳ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ನಮ್ಮ ಪಕ್ಷ ಕಳೆದ ಬಾರಿಗಿಂತಲೂ ಹೆಚ್ಚು ಪ್ರಗತಿ ಸಾಧಿಸಿದೆ ಎಂದರು.
ಬಿಜೆಪಿ ಶಾಸಕರಿದ್ದ ಕಡೆಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎಂಬ ಪ್ರಶ್ನೆಗೆ, ಕಾಂಗ್ರೆಸ್ ಶಾಸಕರಿದ್ದ ಕಡೆಗೆ ಅವರು ಹೆಚ್ಚಿನ ಸ್ಥಾನ ಗೆದ್ದಿದ್ದಾರಾ? ಎಂದು ಮರುಪ್ರಶ್ನೆ ಮಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಈ ರೀತಿಯ ಫಲಿತಾಂಶ ಸಹಜ. ಈ ಕುರಿತು ಪರಾಮರ್ಶೆ ಮಾಡುತ್ತೇವೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/12/2021 02:31 pm