ವರದಿ : ವಿನೋದ ಇಚ್ಚಂಗಿ, ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ
ಅಣ್ಣಿಗೇರಿ : ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನಿಷ್ಕಾಳಜಿಯೇ ಅಣ್ಣಿಗೇರಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಮುಗ್ಗರಿಸಲು ಕಾರಣ ಎಂದು ಅಣ್ಣಿಗೇರಿ ಪಟ್ಟಣದಲ್ಲಿ ಜಿಲ್ಲಾ ಯೂತ್ ಕಾಂಗ್ರೇಸ್ ಗ್ರಾಮೀಣ ಅಧ್ಯಕ್ಷ ವಿನೋದ ಅಸೂಟಿ ಅವರು ಹೇಳಿದರು.
ಅಣ್ಣಿಗೇರಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಅತೀ ಹೆಚ್ಚು ಸ್ಥಾನ ಪಡೆದ ಹಿನ್ನೆಲೆ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿನೋದ ಅಸೂಟಿ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನಿಷ್ಕಾಳಜಿಯೇ ಅಣ್ಣಿಗೇರಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಮುಗ್ಗರಿಸಲು ಕಾರಣ, ಜಿಲ್ಲಾ ಉಸ್ತುವಾರಿ ಸಚಿವ ಎಂಬ ಕಾರಣದಿಂದ ಅವರು ಯಾವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಧ್ವನಿ ಎತ್ತಿಲ್ಲ, ನವಲಗುಂದ ವಿಧಾನ ಸಭಾ ಕ್ಷೇತ್ರದಲ್ಲಿನ ರಸ್ತೆಗಳು ಬಹುತೇಕ ಹದಗೆಟ್ಟಿವೆ ಅಭಿವೃದ್ಧಿ ಮಾಡ್ತಿಲ್ಲ. ಮೊದಲು ಅವರು ಶಾಸಕರಾಗಿದ್ದರು ಈಗ ಸಚಿವರಿದ್ದಾರೆ. ಈಗಲಾದರೂ ಅಭಿವೃದ್ಧಿ ಕಾರ್ಯವನ್ನು ಮಾಡಬೇಕು ಎಂದರು.
Kshetra Samachara
30/12/2021 05:21 pm