ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎಂಇಎಸ್ ನಿಷೇಧಿಸಿ ರಾಜ್ಯಪಾಲರಿಗೆ ಪತ್ರ ರವಾನಿಸಿದ ಕರವೇ

ಧಾರವಾಡ: ಬೆಳಗಾವಿಯಲ್ಲಿ ಸದಾ ಪುಂಡಾಟಿಕೆ ನಡೆಸುತ್ತಲೇ ಇರುವ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧಾರವಾಡದಲ್ಲಿ ಪತ್ರ ಚಳುವಳಿ ನಡೆಸಿದರು.

ಧಾರವಾಡದ ಹೆಡ್‌ ಪೋಸ್ಟ್ ಎದುರು ಪ್ರತಿಭಟನೆ ನಡೆಸಿದ ಅವರು, ರಾಜ್ಯದಲ್ಲಿ ಈ ಎರಡೂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದು ಕಳುಹಿಸಿದರು.

ಬೆಳಗಾವಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಲಾಗಿದೆ, ಬಸವೇಶ್ವರರ ಭಾವಚಿತ್ರಕ್ಕೆ ಸಗಣಿ ಸವರಿ ಅವಮಾನಿಸಲಾಗಿದೆ. ಈ ರೀತಿ ಅಮಾನುಷ ಕೃತ್ಯಗಳನ್ನು ಮಾಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆಯನ್ನು ಕರ್ನಾಟಕ ರಾಜ್ಯದಲ್ಲಿ ಶಾಶ್ವತವಾಗಿ ನಿಷೇಧಿಸಬೇಕೆಂದು ಆಗ್ರಹಿಸಿದರು.

Edited By : Nagesh Gaonkar
Kshetra Samachara

Kshetra Samachara

31/12/2021 04:20 pm

Cinque Terre

31.2 K

Cinque Terre

3

ಸಂಬಂಧಿತ ಸುದ್ದಿ