ಧಾರವಾಡ: ನಮ್ಮ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುತ್ತಿದೆ. ಅವರಿಂದ ನಾವು ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಮೊಸರಿನಲ್ಲಿ ಕಲ್ಲು ಹುಡುಕುವ ಹಾಗೂ ರಾಜಕೀಯ ಲಾಭಕ್ಕಾಗಿ ಈ ಪಾದಯಾತ್ರೆ ಮಾಡುತ್ತಿದ್ದಾರೆ. ಮೇಕೆದಾಟು ಯೋಜನೆ ಬಗ್ಗೆ ನಮ್ಮ ಸರ್ಕಾರ ಬದ್ಧತೆಯಿಂದ ಈಗಾಗಲೇ ಕೆಲಸ ಕೂಡ ಮಾಡುತ್ತಿದೆ ಎಂದರು.
ಸಿದ್ದರಾಮಯ್ಯ ಅವರು ಏನು ಹೇಳುತ್ತಾರೋ ಅದಕ್ಕೆಲ್ಲ ಪ್ರತಿಕ್ರಿಯೆ ಕೊಡೋದಕ್ಕೆ ಆಗೋದಿಲ್ಲ ಎಂದು ಸಿಎಂ ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/01/2022 07:22 pm