ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಮು ಗಲಭೆ ಹುಟ್ಟುಹಾಕುವ ಭಾಷಣಗಳಿಗೆ ಕಡಿವಾಣ ಹಾಕಿ

ಧಾರವಾಡ: ರಾಜ್ಯದಲ್ಲಿ ಕ್ರೈಸ್ತ ಧರ್ಮದ ಚರ್ಚ್‌ಗಳು ಹಾಗೂ ಅಲ್ಪಸಂಖ್ಯಾತರ ಮೇಲೆ ಇತ್ತೀಚೆಗೆ ನಡೆಯುತ್ತಿರುವ ದೌರ್ಜನ್ಯ ಹಾಗೂ ದಬ್ಬಾಳಿಕೆಗಳನ್ನು ತಡೆಯುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಅಲ್ಪಸಂಖ್ಯಾತರಾದ ಕ್ರೈಸ್ತ ಧರ್ಮದ ಚರ್ಚ್ ಮತ್ತು ಮುಸ್ಲಿಂ ಧರ್ಮದ ವಿರುದ್ಧ ಕೋಮು ಗಲಭೆಗಳನ್ನು ಹಬ್ಬಿಸುವ ದೃಷ್ಠಿಯಿಂದ ಪ್ರಚೋದನಕಾರಿ ಭಾಷಣಗಳನ್ನು ಮಾಡಲಾಗುತ್ತಿದೆ.

ವಿನಾಕಾರಣ ಅಲ್ಪಸಂಖ್ಯಾತರ ಸಮುದಾಯದ ಮೇಲೆ ದಾಳಿ ಮಾಡಲಾಗುತ್ತಿದೆ. ಇಂತಹ ಘಟನೆಗಳು ಆಗಾಗ ಮರುಕಳಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಇದೇ ರೀತಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ಉಗ್ರ ಹೋರಾಟ ನಡೆಸಲಾಗುವುದು. ಆದ್ದರಿಂದ ಸರ್ಕಾರಕ್ಕೆ ರಾಜ್ಯಪಾಲಕರು ಸೂಕ್ತ ನಿರ್ದೇಶನ ನೀಡಬೇಕು ಎಂದು ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

03/01/2022 01:09 pm

Cinque Terre

5.69 K

Cinque Terre

0

ಸಂಬಂಧಿತ ಸುದ್ದಿ