ಹುಬ್ಬಳ್ಳಿ : ರಾಜ್ಯದಲ್ಲಿ ಲಾಕ್ ಡೌನ್ ವಿಚಾರ ಕೋವಿಡ್ ಬಗ್ಗೆ ಮುನ್ನೆಚ್ಚರಿಕೆ ಕೈಗೊಂಡರೆ ಲಾಕ್ ಡೌನ್ ಅಗತ್ಯವಿಲ್ಲ. ಲಾಕ್ ಡೌನ್ ಒಂದೇ ಮದ್ದಲ್ಲ. ಅನಿವಾರ್ಯವಾದಲ್ಲಿ ಲಾಕ್ ಡೌನ್ ಮಾಡಲೇಬೇಕಾಗುತ್ತದೆ. ಆದರೆ ಈಗಾಗಲೇ ಲಾಕ್ ಡೌನ್ ನಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ. ಮತ್ತೆ ಲಾಕ್ ಡೌನ್ ಜಾರಿಯಾದ್ರೆ ಮತ್ತಷ್ಟು ತೊಂದರೆಯಾಗಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಜನ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿಲ್ಲ. ಶಾಲಾ ಮಕ್ಕಳಲ್ಲಿಯೂ ಕೋವಿಡ್ ಹೆಚ್ಚಳವಾಗುತ್ತಿದೆ ಅನಿವಾರ್ಯವಾದಾಗ ಸರ್ಕಾರ ಒಂದು ತೀರ್ಮಾನ ತೆಗೆದುಕೊಳ್ಳುತ್ತದೆ. ನಮ್ಮ ಸರ್ಕಾರ ಸಾಕಷ್ಟು ಕಾಳಜಿ ವಹಿಸಿದೆ. ಎಲ್ಲಿಯೂ ಜವಾಬ್ದಾರಿಯಿಂದ ನುಣುಚಿಕೊಂಡಿಲ್ಲ. ಇದಕ್ಕೆ ಜನ ಹೆಚ್ಚು ಸಹಕಾರ ಕೊಡಬೇಕು ಎಂದು ಹೊರಟ್ಟಿ ಹೇಳಿದರು.
Kshetra Samachara
03/01/2022 03:58 pm