ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಪಂ ಕಚೇರಿ ಮುಂದೆ ಆಶಾಗಳ ಆಕ್ರೋಶ

ಧಾರವಾಡ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಧಾರವಾಡದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಧಾರವಾಡದ ಕಲಾಭವನ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಆಶಾಗಳು, ಈ-ಸಂಜೀವಿನಿ, ಎನ್‌ಸಿಡಿ ಸರ್ವೆ, ಕ್ವಾರಂಟೈನ್ ಆ್ಯಪ್ ಮೂಲಕ ಕೆಲಸ, ಈ-ಸಮೀಕ್ಷೆ ಕೆಲಸಗಳನ್ನು ಆಶಾಗಳಿಂದ ಒತ್ತಾಯ ಪೂರ್ವಕವಾಗಿ ಮಾಡಿಸುವುದನ್ನು ಕೈಬಿಡಬೇಕು, ಕಳೆದ ಸೆಪ್ಟಂಬರ್‌ನಿಂದ ಇಲ್ಲಿಯವರೆಗೆ ಕೇಂದ್ರದಿಂದ ನೀಡಲಾಗುವ ಕೊರೊನಾ ಕೆಲಸದ 1 ಸಾವಿರ ಬಾಕಿ ವೇತವನ್ನು ಕೂಡಲೇ ಬಿಡುಗಡೆ ಮಾಡಬೇಕು, ಆರ್‌ಸಿಎಚ್ ಪೋರ್ಟಲ್‌ನಲ್ಲಿ ಎಎನ್‌ಸಿ ಹಾಗೂ ಪಿಎನ್‌ಸಿ ಇನ್ನಿತರ ಹಲವು ಆಶಾ ಕೆಲಸಗಳು ಡಾಟಾ ಎಂಟ್ರಿ ಆಗುತ್ತಿಲ್ಲ. ಇದರಿಂದಾಗಿ ಆಶಾಗಳಿಗೆ ಕೆಲಸ ಮಾಡಿದಷ್ಟು ಪ್ರೋತ್ಸಾಹ ಧನ ಸಿಗುತ್ತಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಶಾ ಕಾರ್ಯಕರ್ತೆಯರು ಒತ್ತಾಯಿಸಿದರು.

Edited By : Nagesh Gaonkar
Kshetra Samachara

Kshetra Samachara

03/01/2022 07:23 pm

Cinque Terre

48.79 K

Cinque Terre

0

ಸಂಬಂಧಿತ ಸುದ್ದಿ