ಕುಂದಗೋಳ : ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಸಾಮಾಜಿಕವಾಗಿ ದೇಶದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ, ಈಗ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕುಂದಗೋಳ ಪಟ್ಟಣದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಹೆಚ್ಚಿನ ಸಂಖ್ಯೆಯಲ್ಲಿ ಕುಂದಗೋಳ ಪಟ್ಟಣದಲ್ಲಿನ ಜನ ಕಾಂಗ್ರೆಸ್ ಸದಸ್ಯರಾಗಿ ಪಕ್ಷಕ್ಕೆ ಸದಸ್ಯರಾಗಿ ಬೆಂಬಲ ನೀಡಬೇಕು ಎಂದರು, ಅವರು ಕುಂದಗೋಳ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಸಸಿಗೆ ನಿರೆರೇದು ಸದಸ್ಯತ್ವದ ಪುಸ್ತಕ ಹಸ್ತಾಂತರ ಮಾಡಿ ಮಾತನಾಡಿದರು.
ಈ ವೇಳೆ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸುರೇಶ್ ಗಂಗಾಯಿ ಮಾತನಾಡಿ ನಗರದಲ್ಲಿ ಹತ್ತು ಸಾವಿರಕ್ಕೂ ಹೆಚ್ಚಿನ ಜನ ಕಾಂಗ್ರೆಸ್ ಸದಸ್ಯತ್ವಕ್ಕೆ ನೋಂದಾಯಿಸಲು ನಾವು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ, ಮಾಜಿ ಶಾಸಕ ಎಮ್.ಎಸ್.ಅಕ್ಕಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಸುರೇಶ್ ಗಂಗಾಯಿ, ಕಾಂಗ್ರೆಸ್ ಮುಖಂಡ ಚಂದ್ರಶೇಖರ ಜುಟ್ಟಲ್, ಕಾಂಗ್ರೆಸ್ ಮುಖಂಡ ರಮೇಶ್ ಕೊಪ್ಪದ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಧೃತಿ ಸಾಲ್ಮನಿ, ಹಾಗೂ ಮುಖಂಡ ರಾಜೇಸಾಬ್ ಕಳ್ಳಿಮನಿ ಉಪಸ್ಥಿತರಿದ್ದರು.
Kshetra Samachara
04/01/2022 11:53 am