ಧಾರವಾಡ: ರಾಮನಗರದಲ್ಲಿ ನಿನ್ನೆ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ ಅವರು ಸಚಿವ ಡಾ.ಅಶ್ವತ್ಥನಾರಾಯಣ ಅವರ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಸಂಸ್ಕೃತ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆಯಲ್ಲೇ ಡಿ.ಕೆ.ಸುರೇಶ ಅವರು ತಮ್ಮ ಗೂಂಡಾ ವರ್ತನೆ ತೋರಿದ್ದಾರೆ. ಮುಖ್ಯಮಂತ್ರಿಗಳು ವೇದಿಕೆಯಲ್ಲಿದ್ದರೂ ಅವರಿಗೆ ಗೌರವ ಕೊಡದೇ ಒಬ್ಬ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಈ ರೀತಿ ಗೂಂಡಾಗಿರಿ ಮಾಡಿರುವ ಡಿ.ಕೆ.ಸುರೇಶ ಹಾಗೂ ಇನ್ನಿತರರ ಮೇಲೆ ರಾಜ್ಯಪಾಲರು ಕಾನೂನು ಕ್ರಮ ಜರುಗಿಸಲು ಆದೇಶ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.
Kshetra Samachara
04/01/2022 01:36 pm