ವರದಿ:ಬಿ.ನಂದೀಶ
ಅಣ್ಣಿಗೇರಿ ; ಅಣ್ಣಿಗೇರಿ ತಾಲೂಕಿನ ಜೆಡಿಎಸ್ ಪಕ್ಷದ ತಾಲೂಕ ಅಧ್ಯಕ್ಷರಾಗಿದ್ದ ಪ್ರದೀಪ್ ಲೆಂಕನಗೌಡರ ಜಾತ್ಯತೀತ ಜನತಾದಳ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳುವ ಬಗ್ಗೆ ಪಟ್ಟಣದಲ್ಲಿ ತಿಳಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ತಾಲೂಕಿನ ಮಾಜಿ ಶಾಸಕರಾದ ಎನ್.ಹೆಚ್.ಕೋನರೆಡ್ಡಿ ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಜಾತ್ಯತೀತ ಜನತಾದಳ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಸೇರ್ಪಡೆಗೊಂಡಿದ್ದು, ನಾವು ಸೇರ್ಪಡೆಗೊಳ್ಳುವ ದಾಗಿ ತಿಳಿಸಿದರು.
ಇನ್ನು ತಾಲೂಕಿನಲ್ಲಿ ಮಾಜಿ ಶಾಸಕ ಎನ್.ಹೆಚ್. ಕೋನರೆಡ್ಡಿ ರವರು ಶಾಸಕರಿದ್ದ ಸಮಯದಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿರುತ್ತಾರೆ. ಅಂಥವರನ್ನು ನಾವು ಈಗ ಬೆಂಬಲಿಸಿ ತಾಲೂಕಿನ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ದಾಗಿ ತಿಳಿಸಿದರು.ಇಲ್ಲಿಯವರೆಗೆ ನಮ್ಮನ್ನು ಹೆಚ್.ಡಿ.ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ಬಹಳ ವಿಶ್ವಾಸದಿಂದ ಕಂಡಿದ್ದಾರೆ,ಆದರೆ ಇಲ್ಲಿನ ವಾಸ್ತವಕ್ಕೆ ತಕ್ಕಂತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಳ್ಳುವುದಾಗಿ ತಿಳಿಸಿದರು. ಇದರಿಂದ ನನ್ನ ತಾಲೂಕಿನ ಅಧ್ಯಕ್ಷ ಸ್ಥಾನವನ್ನು ತೊರೆದು ಹೆಚ್.ಡಿ. ಕುಮಾರಸ್ವಾಮಿಯವರಿಗೆ ರಾಜೀನಾಮೆಯನ್ನು ಕಳಿಸಿ ಕೊಡುವುದಾಗಿ ಹೇಳಿದರು.
ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಹುದ್ದೆ ನೀಡಿದರು ಅತ್ಯಂತ ಪ್ರಾಮಾಣಿಕರಾಗಿ ಕೆಲಸ ನಿರ್ವಹಿಸುತ್ತಿವೆ ಎಂದು ತಿಳಿಸಿದರು. ಸಂಕ್ರಾಂತಿಯ ನಂತರ ಜಿಲ್ಲಾ ಮತ್ತು ತಾಲೂಕು ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರುವುದಾಗಿ ತಿಳಿಸಿದರು.
Kshetra Samachara
05/01/2022 12:06 pm