ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಸಿಂಧುಗೊಳಿಸಬೇಕು. ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಚುನಾವಣೆ ಸಂವಿಧಾನ ಬದ್ಧವಾಗಿ ನಡೆದಿಲ್ಲ ವಾರ್ಡ್ ವಿಂಗಡಣೆ, ಮೀಸಲಾತಿ ಇತ್ಯಾದಿಗಳ ಸಂವಿಧಾನಬದ್ಧವಾಗಿ ನಡೆದಿಲ್ಲ. ಈ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ವೇದಿಕೆಯ ಮುಖಂಡ ಬಸವರಾಜ ಭಜಂತ್ರಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,2011ರ ಜನಗಣತಿ ಅನ್ವಯ ವಾರ್ಡ್ ಗಳನ್ನು ವರ್ಗೀಕರಿಸಿಲ್ಲ. ಇದರಿಂದ ಪರಿಶಿಷ್ಟರು, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಅನ್ಯಾಯವಾಗಿದೆ.ಹೀಗಾಗಿ ಮಹಾನಗರ ಪಾಲಿಕೆ ಚುನಾವಣೆಯನ್ನು ಅಸಿಂಧುಗೊಳಿಸಬೇಕು. ವೈಜ್ಞಾನಿಕವಾಗಿ ವಾರ್ಡ್ ಗಳನ್ನು ಮರು ವಿಂಗಡನೆ ಮಾಡಿ ಮೀಸಲಾತಿ ಸರಿಪಡಿಸಿ ಚುನಾವಣೆ ನಡೆಸಬೇಕು. ಈ ಸಂಬಂಧ ಕರ್ನಾಟಕ ಹೈಕೋರ್ಟ್ ಪೀಠದ ಮೊರೆ ಹೋಗಿದ್ದೇವೆ. ಶೀಘ್ರವೇ ನಮಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
Kshetra Samachara
06/01/2022 02:02 pm