ಹುಬ್ಬಳ್ಳಿ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಚುನಾವಣಾ ಗಿಮಿಕ್. ಬಿಬಿಎಂಪಿ ಮತ್ತು ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಕೈಗೊಂಡಿದ್ದಾರೆ. ಸರ್ಕಾರ ಯಾರದ್ದೇ ಇದ್ದರೂ ಪಾದಯಾತ್ರೆ ಮಾಡಿಯೇ ತೀರುತ್ತೇವೆ ಎನ್ನುವ ಹಠ ಸರಿಯಲ್ಲ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಎಚ್ಚರಿಕೆ ಕೊಟ್ಟಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲ ಅಧಿವೇಶನ ನಡೆದು ಹದಿನೈದು ದಿನಗಳಾಗಿಲ್ಲ. ಅಧಿವೇಶನದಲ್ಲಿ ಕಾಂಗ್ರೆಸ್‌ನವರು ಮೇಕೆದಾಟು ಯೋಜನೆ ಬಗ್ಗೆ ಚರ್ಚೆಯನ್ನೇ ಮಾಡಲಿಲ್ಲ. ಕೇವಲ ಪ್ರಚಾರದ ದೃಷ್ಟಿಯಿಂದ, ಚುನಾವಣೆ ದೃಷ್ಟಿಯಿಂದ ಪಾದಯಾತ್ರೆ ಕೈಗೊಂಡಿದ್ದಾರೆ ಎಂದರು.
ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನ ಇವರಿಗೆ ತಕ್ಕ ಉತ್ತರ ನೀಡುತ್ತಾರೆ. ಕಾಂಗ್ರೆಸ್ ಪಾದಯಾತ್ರೆ ಇತ್ಯಾದಿ ಘಟನೆಗಳ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ವರದಿಯನ್ನು ತರಿಸಿಕೊಳ್ಳುತಾರೆ. ಖಂಡಿತವಾಗಿ ಮುಂದಿನ ಕ್ರಮಕೈಗೊಳ್ಳುತ್ತಾರೆ. ರಾಜ್ಯ ಸರ್ಕಾರ ಇದೆಲ್ಲವನ್ನೂ ಎದುರಿಸುವುದಕ್ಕೆ ಸಮರ್ಥವಾಗಿದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
10/01/2022 01:34 pm