ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕೊಟ್ಟ ಮಾತು ಉಳಿಸಿಕೊಂಡ ಸಿಎಂ ಬೊಮ್ಮಾಯಿ- ಸ್ವಂತ ಮನೆಯಲ್ಲಿ ಕಮಲವ್ವನ ಹಬ್ಬದ ಸಂಭ್ರಮ

ಹುಬ್ಬಳ್ಳಿ: ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವ ಅವರಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟ. ಅಂದು ಖಾಸಗಿ ವಾಹಿನಿಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟ ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವ ಅವರು ತಮ್ಮ ಸಂಕಷ್ಟ ತೋಡಿಕೊಂಡಿದ್ದರು. ಸಂಕಷ್ಟಕ್ಕೆ ಸ್ಪಂದಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನ್ನು ಕೊಟ್ಟಿದ್ದು, ಈಗ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.

ಹೌದು. ಇಬ್ಬರು ಗಂಡು ಮಕ್ಕಳು ಸತ್ತ ಹೋಗ್ಯಾರ, ಮನಿ ಕಟ್ಟಸಿಕೊಡ್ರಿ ಸಾಹೇಬ್ರ ಎಂದು ಗದ್ಗದಿತಳಾಗಿ ನುಡಿದ ಕಮಲವ್ವ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಂತ್ವನ ಹೇಳಿದ್ದರು. ಇಂದು ಕಮಲವ್ವ ಸ್ವಂತ ಸೂರಿನಡಿ ಹಬ್ಬ ಆಚರಿಸುವಂತೆ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಶಿಗ್ಗಾಂವಿಯ ಮಂಚಿನಕೊಪ್ಪ ಗ್ರಾಮದ ಕಮಲವ್ವ ತಿಮ್ಮನಗೌಡ್ರ ತಮಗೆ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ನಾಲ್ಕೇ ತಿಂಗಳಿನಲ್ಲಿ ಮನೆ ನಿರ್ಮಿಸಿ, ಸಂಕ್ರಾಂತಿಯಂದು ಕಮಲವ್ವನಿಗೆ ಮನೆಯನ್ನು ಹಸ್ತಾಂತರಿಸಲಾಯಿತು.

ಹ್ಯಾಬಿಟ್ಯಾಟ್ ಸೆಂಟರ್ ಮೂಲಕ ನಿರ್ಮಿಸಲಾದ ಸುಸಜ್ಜಿತ ಮನೆಯನ್ನು ಸವಣೂರ ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅವರು ಹಸ್ತಾಂತರಿಸಿದರು.

Edited By : Vijay Kumar
Kshetra Samachara

Kshetra Samachara

17/01/2022 09:50 pm

Cinque Terre

9.98 K

Cinque Terre

2

ಸಂಬಂಧಿತ ಸುದ್ದಿ