ಹುಬ್ಬಳ್ಳಿ: ಜನ ವಿರೋಧಿ ಮೂರು ಕರಾಳ ಕೃಷಿ ಕಾಯಿದೆಯನ್ನು ಕರ್ನಾಟಕ ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಜನಾಂದೋಲನಗಳ ಮಹಾಮೈತ್ರಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ರಾಜ್ಯಾದ್ಯಂತ ಜನ ಜಾಗೃತಿ ಜಾಥಾ ನಡೆಸಲಾಗುವುದು ಎಂದು ಜನಾಂದೋಲನ ಮಹಾಮೈತ್ರಿ ಮುಖ್ಯಸ್ಥ ಎಸ್.ಆರ್.ಹಿರೇಮಠ ತಿಳಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೂರು ಕರಾಳ ಕೃಷಿ ಕಾಯಿದೆಯನ್ನು ಜನಾಂದೋಲಕ್ಕೆ ಮಣಿದು ರದ್ದುಗೊಳಿಸಿದ್ದು, ಅದೇ ಮಾರ್ಗದಲ್ಲಿ ರಾಜ್ಯ ಸರ್ಕಾರ 2020 ಸೆಪ್ಟೆಂಬರ್ ನಲ್ಲಿ ತಿದ್ದುಪಡಿ ತಂದಿರುವ ಕೃಷಿ ಕಾಯಿದೆಯನ್ನು ಕೈಬಿಡಬೇಕಾಗಿದೆ. ಈ ದಿಸೆಯಲ್ಲಿ ಜನಾಂದೋಲನಗಳ ಮಹಾಮೈತ್ರಿಯಿಂದ 2021 ಡಿ.26 ರಂದು ಮೈಸೂರು ಹಾಗೂ ಧಾರವಾಡದಲ್ಲಿ ಸಾಮಾನ್ಯ ಸಭೆ ನಡೆಸಿ ಕೃಷಿ ಕಾಯಿದೆ ರದ್ದತಿ ಹಾಗೂ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುವ ಹಿನ್ನೆಲೆಯಲ್ಲಿ ಯುವಕರಲ್ಲಿ ಜಾಗೃತಿ ಮೂಡಿಸಲು ಮುಂಬರುವ ರಾಜ್ಯ ಬಜೆಟ್ ಅಧಿವೇಶನದವರೆಗೆ ರಾಜ್ಯಾದ್ಯಂತ ಜನಜಾಗೃತಿ ಜಾಥಾಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ ಬಸವಕಲ್ಯಾಣ ಮತ್ತು ಮಹದೇಶ್ವರ ಬೆಟ್ಟದಿಂದ ಜಾಥಾ ನಡೆಸಿ ಜನರ ಬೇಡಿಕೆ, ಅಭಿಪ್ರಾಯ ಸಂಗ್ರಹಿಸಿ ಬೆಂಗಳೂರಿನಲ್ಲಿ ಬೃಹತ ಸಮಾವೇಶ ನಡೆಸಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಕೃಷಿ ಕಾಯಿದೆ ರದ್ದುಗೊಳಿಸಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ದ್ವೇಷಪೂರಿತ ಭಾಷಣ ಖಂಡನೀಯ: ಹರಿದ್ವಾರದ ಧರ್ಮ ಸಂಸದದಲ್ಲಿ ಮುಸ್ಲಿಂರ ಹತ್ಯಾಕಾಂಡ ಮತ್ತು ಅವರ ವಿರುದ್ಧ ಆಯುಧಗಳ ಬಳಕೆಗೆ ಬಹಿರಂಗವಾಗಿ ಕರೆ ನೀಡುವ ದ್ವೇಷಪೂರಿತ ಭಾಷಣ ನಡೆದಿರುವುದನ್ನು ಸಿಟಿಜನ ಫಾರ್ ಡೆಮಾಕ್ರಸಿ, ಜನಾಂದೋಲನಗಳ ಮಹಾಮೈತ್ರಿ ತೀವ್ರವಾಗಿ ಖಂಡಿಸುವುದು, ಅಲ್ಲದೇ ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯೆಪ್ರವೇಶಿಸಿ ದೇಶದ ಗೌರವ ಉಳಿಸಿರುವುದು ಸ್ವಾಗತರ್ಹವಾಗಿದೆ. ಈ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿಗಳು, ಗೃಹ ಸಚಿವರು ಹಾಗೂ ಉತ್ತರಖಂಡದ ಮುಖ್ಯಮಂತ್ರಿಗಳು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲವಾದರೇ ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ತಮ್ಮ ಹುದ್ದೆಗಳಿಗೆ ರಾಜೀರಾಮೆ ನೀಡಬೇಕೆಂದು ಒತ್ತಾಯಿಸಿದರು.
Kshetra Samachara
20/01/2022 02:09 pm