ಅಣ್ಣಿಗೇರ : ಜನವರಿ 26 ಗಣರಾಜ್ಯೋತ್ಸವ ದಿನದಂದು ಡಾ ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇರಬೇಕು ಎಂಬ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಇಡಬೇಕು ಎಂದು ಕರ್ನಾಟಕ ದಲಿತ ವಿಮೋಚನಾ ಸಮಿತಿ ಅಣ್ಣಿಗೇರಿ ತಾಲೂಕು ಘಟಕ ವತಿಯಿಂದ ತಹಶೀಲ್ದಾರ್ ಗೆ ಮನವಿಯನ್ನು ಸಲ್ಲಿಸಲಾಯಿತು.
ತಾಲೂಕು ದಂಡಾಧಿಕಾರಿ ಮಂಜುನಾಥ್ ಅಮಾಸೆ ಅವರಿಗೆ ತಮ್ಮ ವ್ಯಾಪ್ತಿಗೆ ಬರುವ ತಾಲೂಕು ಮಟ್ಟದ, ಗ್ರಾಮಗಳ ಮಟ್ಟದ, ಎಲ್ಲ ಇಲಾಖೆಗಳಿಗೂ ಆದೇಶಿಸಲು ವಿನಂತಿ ಕೋರಿ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ದಲಿತರ ವಿಮೋಚನಾ ಸಮಿತಿ ತಾಲೂಕು ಘಟಕ ಅಣ್ಣಿಗೇರಿ ಪದಾಧಿಕಾರಿಗಳು,ಹಾಗೂ ಸದಸ್ಯರು ಉಪಸ್ಥಿತರಿದ್ದರು.
Kshetra Samachara
24/01/2022 03:17 pm