ಧಾರವಾಡ: ನನಗೆ ಸಚಿವ ಸ್ಥಾನ ಕೊಡಿ ಎಂದು ಯಾರಿಗೂ ಬೇಡಿಕೆ ಇಟ್ಟಿಲ್ಲ. ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುತ್ತಾರೆ. ಆದರೆ, ನಾನು ಹೈಕಮಾಂಡ್ ಹೇಳಿದ ಹಾಗೆ ಕೇಳುತ್ತೇನೆ ಎಂದರು.
ಸದ್ಯ ಶಾಸಕನಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಸಿಎಂ ಬೊಮ್ಮಾಯಿ ಒಬ್ಬ ಪ್ರಬುದ್ಧ ರಾಜಕಾರಣಿ. ಹೊಸ ಎಕ್ಸಪೀರಿಮೆಂಟ್ ಸಲುವಾಗಿ ಬೇರೆಯವರಿಗೆ ಬೇರೆ ಬೇರೆ ಜಿಲ್ಲೆಗಳ ಉಸ್ತುವಾರಿ ಕೊಟ್ಟಿದ್ದಾರೆ. ಸಚಿವರು ಹೊಸ ಜಿಲ್ಲೆಗಳ ಉಸ್ತುವಾರಿಗಳಾಗಿ ಕೆಲಸ ಮಾಡುತ್ತಾರೆ ಎಂದರು.
ಹರಿಹರ ಸ್ವಾಮೀಜಿ ಮತ್ತು ಕೂಡಲ ಸಂಗಮ ಸ್ವಾಮೀಜಿ ಮಧ್ಯೆ ವೈಮನಸ್ಸು ಇರುವುದು ನಿಜ. ಮೂರನೇ ಪೀಠ ಸ್ಥಾಪನೆ ಮಾಡಬಾರದು. ಎರಡು ಪೀಠವೇ ಮೊದಲಿಗೆ ಆಗಬಾರದಿತ್ತು. ಕೂಡಲಸಂಗಮ ಪೀಠವನ್ನು ಜನರು ಒಪ್ಪಿಕೊಂಡಿದ್ದಾರೆ ಎಂದು ಬೆಲ್ಲದ ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
24/01/2022 10:03 pm