ಧಾರವಾಡ: ಸರಿಯಾಗಿ ಕಾರ್ಯ ನಿರ್ವಹಿಸದ ಅಧಿಕಾರಿಗಳ ಮೇಲೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಎಚ್ಚರಿಕೆ ನೀಡಿದ್ದಾರೆ.
ಗಣರಾಜ್ಯೋತ್ಸವದ ಧ್ವಜಾರೋಹಣ ನಂತರ ಧಾರವಾಡ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಮಾರ್ಗ ಸೂಚಿಯನ್ನು ನಿರ್ಲಕ್ಷ್ಯ ಮಾಡುವ ಅಧಿಕಾರಿಗಳ ಮೇಲೆ ಕ್ರಮ ಕೈಕೊಳ್ಳಲಾಗುವುದು. ಹುಬ್ಬಳ್ಳಿ-ಧಾರವಾಡ ಮೇಯರ್ ಆಯ್ಕೆಯನ್ನು ಆದಷ್ಟು ಬೇಗ ಮಾಡಲಾಗುತ್ತದೆ ಎಂದು ತಿಳಿಸಿದರು.
Kshetra Samachara
26/01/2022 12:58 pm