ಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಉತ್ತರ ಪ್ರದೇಶ ಮತ್ತಿತರ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಬಿಜೆಪಿ ಶಕ್ತಿ ಏನು ಎಂಬುದು ತಿಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಕಾಂಗ್ರೆಸ್‌ನಲ್ಲಿ ಗೊಂದಲವಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಪರಸ್ಪರ ಪೈಪೋಟಿಯಿದೆ. ಆದರೆ ಅವರು ಅಧಿಕಾರ ಹಿಡಿಯುವ ಭ್ರಮೆಯಲ್ಲಿ ಇದ್ದಾರೆ. ಇದರಿಂದ ಅವರು ಹೊರಗೆ ಬರಬೇಕು ಎಂದರು.
ಕಾಂಗ್ರೆಸ್ ಸೇರ್ಪಡೆಯಾಗುವವರು ಯಾರೂ ಇಲ್ಲ. ಸುಮ್ಮನೆ ಈ ರೀತಿ ಸುದ್ದಿ ಹರಡುವ ಮೂಲಕ ಕಾಂಗ್ರೆಸ್ ತನ್ನ ಮರ್ಯಾದೆಯನ್ನು ತಾನೇ ಕಳೆದುಕೊಳ್ಳುತ್ತಿದೆ ಎಂದು ಕುಟುಕಿದ ಅವರು, ಹು-ಧಾ ಮಹಾನಗರ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ದಿನಾಂಕ ಮೀಸಲಾತಿ ನಿಗದಿಯಾದ ನಂತರವೇ ನಿರ್ಧರಿತವಾಗಲಿದೆ ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/01/2022 03:43 pm