ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನ್ಯಾಯಾಧೀಶರ ಪ್ರತಿಕೃತಿ ದಹನ

ಧಾರವಾಡ: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು 73ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಸಮಾರಂಭದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟರೆ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದ ವೃತ್ತಿ ಗೌರವಕ್ಕೆ ಅವಮಾನ ಮಾಡಿದ್ದಲ್ಲದೇ ಸಂವಿಧಾನಕ್ಕೆ ಮತ್ತು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಮತಾ ಸೇನಾ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ಪ್ರತಿಕೃತಿ ದಹಿಸಿ ಅವರ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ನ್ಯಾಯಾಧೀಶರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಮಲ್ಲಿಕಾರ್ಜುನ ಗೌಡ ಅವರು ನ್ಯಾಯಾಧೀಶ ಸ್ಥಾನಕ್ಕೆ ಅರ್ಹತೆಯುಳ್ಳವರೇ ಎಂಬ ಪ್ರಶ್ನೆ ಉದ್ಭವಿಸಿದ್ದು, ಈ ನ್ಯಾಯಧೀಶರ ವಿರುದ್ಧ ಕೂಡಲೇ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ, ಕಲಂ ಅಡಿ ಪ್ರಕರಣ ದಾಖಲಿಸಬೇಕೆಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಒತ್ತಾಯಿಸಿದರು.

Edited By : Nagesh Gaonkar
Kshetra Samachara

Kshetra Samachara

28/01/2022 02:11 pm

Cinque Terre

46.43 K

Cinque Terre

3

ಸಂಬಂಧಿತ ಸುದ್ದಿ