ಹುಬ್ಬಳ್ಳಿ: ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿ ನಗರದ ತಹಶೀಲ್ದಾರರ ಕಚೇರಿ ಎದುರುಗಡೆ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ, ಅಂಬೇಡ್ಕರ್‌ಗೆ ಅವಮಾನ ಮಾಡಿದ್ದು ಖಂಡನೀಯ. ಅದಕ್ಕಾಗಿ ಅವರನ್ನು ನ್ಯಾಯಾಧೀಶ ಹುದ್ದೆಯಿಂದ ವಜಾ ಮಾಡುವಂತೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಹಾಗೂ ಸರಕಾರಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
Kshetra Samachara
28/01/2022 10:14 pm