ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪೋಲೀಸರಿಗೆ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಲು ಡಿಸಿ, ಸಿಎಂಗೆ ಮನವಿ

ಕುಂದಗೋಳ : ತಾಲೂಕಿನ ಕುಂಕೂರು ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಳೆದ ಜನೇವರಿ 12 ರಂದು ಕುಟುಂಬದವರಿಗೆ ಮಾರಕಾಸ್ತ್ರಗಳಿಂದ ಬೆದರಿಸಿ ಮುಸ್ಲಿಂ ಯುವಕ ಅಪರಹರಸಿಕೊಂಡು ಹೋದ ಬಗ್ಗೆ ಬಾಲಕಿ ಕುಟುಂಬದವರ ಸಮ್ಮುಖದಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ನೀಡಿ 17 ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣದ ಮುಂದಿನ ಅಂಶ ತಿಳಿಸದಿರುವ ಕುಂದಗೋಳ ಗ್ರಾಮೀಣ ಪೊಲೀಸ್ ಸೂಕ್ತ ತನಿಖೆ ನಡೆಸಲು ಆದೇಶ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಹೌದು ! ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕುಂದಗೋಳ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಅವರು ಮೂಲಕ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಬಾಲಕಿ ಪ್ರಕರಣದ ಬಗ್ಗೆ ಕುಂದಗೋಳ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಮಾಡುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

29/01/2022 07:52 pm

Cinque Terre

23.34 K

Cinque Terre

0

ಸಂಬಂಧಿತ ಸುದ್ದಿ