ಹುಬ್ಬಳ್ಳಿ: ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ನಾನು ಸಿಎಂ, ನೀನು ಸಿಎಂ ಅಂತ ಇನ್ನರ್ ಫೈಟ್ ನಡೆಯುತ್ತಿದೆ. ಅವರು ಇಬ್ಬರು ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ಭ್ರಮೆಯಲ್ಲಿ ಇದ್ದಾರೆ. ಕಾಂಗ್ರೆಸ್ ಎಲ್ಲಿಯೂ ಅಸ್ಥಿತ್ವದಲ್ಲಿ ಇಲ್ಲದ ಸ್ಥಿತಿ ತಲುಪಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೇಸ್ ಅಂತರಿಕ ಹೊಡೆದಾಟ ಅದು ಇಂತಹ ಗುಸು ಗುಸು ಪಿಸು ಪಿಸು ಮಾತಿನ ಮೂಲಕ ಹೊರಬರುತ್ತಿದೆ. ಪಂಚ ರಾಜ್ಯ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಆಗುತ್ತದೆ.ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಅಡ್ರೆಸ್ ಹುಡುಕಬೇಕು ಎಂದು ಗೆಲಿ ಮಾಡಿದರು.
ಇನ್ನೂ ಬಜೆಟ್ ಕುರಿತಾಗಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಮಂಡನೆಯಾಗಲಿರುವ ಬಜೆಟ್ ರಾಜ್ಯದ ಜನರಿಗೆ ವರದಾನವಾಗಲಿದೆ. ಅಲ್ಲದೇ ವಿಶೇಷ ಯೋಜನೆಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನವನ್ನು ಮೀಸಲಿಡಲಾಗುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/01/2022 03:16 pm