ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಮ್ಮನ್ನು ಕಾಯಂ ನೌಕರರನ್ನಾಗಿ ನೇಮಿಸಿಕೊಳ್ಳಿ

ಧಾರವಾಡ: ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದಲ್ಲಿ ವಾಹನ ಚಾಲಕರಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ಕಾಯಂ ಸಿಬ್ಬಂದಿ ಎಂದು ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಚಾಲಕರು ಇಂದು ಪ್ರಚಾರ ಸಭಾದ ಎದುರು ಪ್ರತಿಭಟನೆ ನಡೆಸಿದರು.

ಕಳೆದ 10 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಚಾಲಕರಾಗಿ ಕೆಲಸ ಮಾಡಲಾಗುತ್ತಿದೆ. ಕಾಯಂ ನೇಮಕಾತಿ ಮಾಡಿಕೊಳ್ಳಿ ಎಂದಿದ್ದಕ್ಕೆ ಇಬ್ಬರು ನೌಕರರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. 10 ವರ್ಷಗಳಿಂದ ಸೇವೆ ಸಲ್ಲಿಸಿದ್ದಕ್ಕೆ ಸಂಸ್ಥೆಯು ಯಾವುದೇ ಸೇವಾ ಭದ್ರತೆ ನೀಡಿಲ್ಲ. ಬಸವರಾಜ ಮಾಡದ ಮತ್ತು ಮಂಜುನಾಥ ಬಳಗಣ್ಣವರ ಎಂಬುವವರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ.

ಸದ್ಯ 20 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಅವರಿಗೆ ವೇತನ ಹೆಚ್ಚಳ ಮಾಡಿ ಸೇವಾ ಭದ್ರತೆ ನೀಡಬೇಕು ಎಂದು ಚಾಲಕರು ಒತ್ತಾಯಿಸಿದರು.

Edited By : Shivu K
Kshetra Samachara

Kshetra Samachara

31/01/2022 12:49 pm

Cinque Terre

49.19 K

Cinque Terre

0

ಸಂಬಂಧಿತ ಸುದ್ದಿ